➤➤ Big Breaking News ನೆಲ್ಯಾಡಿ: ಬೊಲೆರೋ – ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.02. ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಥಾಮ್ಸನ್ ಹಾಗೂ ಸೈರತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top