ಉಚಿತ ಪರೀಕ್ಷಾ ಪೂರ್ವ ತರಬೇತಿ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಐ.ಎ.ಎಸ್., ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2019-20ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 12 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನ್ನು ಹಾಗೂ ಸಹಾಯವಾಣಿ: 8050770004 ಸಂಪರ್ಕಿಸಲು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದ.ಕ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

Also Read  ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್

error: Content is protected !!
Scroll to Top