ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕೋರ್ಸುಗಳಿಗೆ ಪ್ರವೇಶಾತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣ ಕೇಂದ್ರದ 2019-20ನೇ ಸಾಲಿನ ಬಿ.ಎ., ಬಿ.ಕಾಂ., ಬಿ.ಬಿ.ಎ. ಮತ್ತು ಎಂ.ಎ., ಎಂ.ಕಾಂ., ಎಂ.ಬಿ.ಎ.(ಟೂರಿಸಂ) ಕೋರ್ಸುಗಳಿಗೆ ಪ್ರವೇಶಾತಿ ಜುಲೈ 1 ರಿಂದ ಆರಂಭಗೊಂಡು ಆಗಸ್ಟ್ 31, 2019 ಕೊನೆಯ ದಿನಾಂಕವಾಗಿರುತ್ತದೆ.

ಯಾವುದೇ ವೃತ್ತಿಯಲ್ಲಿ ಅಥವಾ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸವನ್ನು ಮುಂದುವರಿಸಲಿರುವವರಿಗೆ ಈ ಕೋರ್ಸುಗಳು ಅನುಕೂಲಕರವಾಗುತ್ತದೆ.ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳು ಸರಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು, ಉಡುಪಿ, ಎಫ್.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ, ಯೂನಿವರ್ಸಿಟಿ ಕಾಲೇಜು, ಮಂಗಳೂರು ಅಥವಾ ದೂರಶಿಕ್ಷಣ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಇಲ್ಲಿ ಪ್ರವೇಶಾತಿ ಪಡೆಯಬಹುದು.ದೂರ ಶಿಕ್ಷಣ ಕೋರ್ಸುಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ ವೆಬ್ ಸೈಟ್:www.mangaloreuniversity.ac.in ನ್ನು ನೋಡಬಹುದಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

Also Read  ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು

error: Content is protected !!