ವೆನ್‍ಲಾಕ್‍ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಚಿಕಿತ್ಸಾ ಘಟಕವನ್ನು ಸ್ಥಾಪಿಸಲಾಗುವುದು.

 

ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಇಂದು ನಡೆದ ವೆನ್‍ಲಾಕ್ ಆರೋಗ್ಯ ರಕ್ಷಾ ಸಭೆಯಲ್ಲಿ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡುವ ಕೇಂದ್ರವನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಯ ನೆರವಿನೊಂದಿಗೆ ಸ್ಥಾಪಿಸಲಾಗುವುದು ಇದಲ್ಲದೇ 36 ಹಾಸಿಗೆಗಳ ತೀವ್ರ ನಿಗಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದರು.

25 ಕೋಟಿಯ ನೂತನ ವೈದ್ಯಕೀಯ ಶಾಸ್ತ್ರದ ವಿಭಾಗಕ್ಕೆ ತೀವ್ರ ನಿಗಾ ಘಟಕ ಸ್ಥಾಪಿಸಲು ಸ್ಮಾರ್ಟ್‍ಸಿಟಿ ವತಿಯಿಂದ 3 ಕೋಟಿ ಅನುದಾನ ಬಿಡುಗಡೆ ಮಾಡಲು ಒಪ್ಪಿರುತ್ತಾರೆ. ಇಲ್ಲಿಗೆ ಬೇಕಾಗುವ ಮಾನವ ಸಂಪನ್ಮೂಲ ಸೌಲಭ್ಯ ಪಡೆಯಲು ಮಾನ್ಯ ಸಚಿವರು ತಿಳಿಸಿದರು. ಖಾಸಗಿ ಆಸ್ಪತ್ರೆಯಲ್ಲಿ ನಿರ್ವಹಣೆ ಮಾಡುತ್ತಿರುವ ಸಿಟಿ ಸ್ಕ್ಯಾನ್ ಮತ್ತು ಎಂ.ಆರ್.ಐ ಸ್ಕ್ಯಾನ್ ಬಳಸುವ ಫಲಾನುಭವಿಗಳಿಗೆ ಸರಕಾರದಿಂದ ವೆಚ್ಚ ಭರಿಸಲಾಗುವುದು ಇದರ ಉಪಯೋಗ ಪಡೆದುಕೊಳ್ಳಲು ಸಚಿವರು ಸೂಚಿಸಿದರು.

Also Read  ➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ

error: Content is protected !!
Scroll to Top