(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಮಂಗಳೂರು ಸಂಖ್ಯಾ ಶಾಸ್ತ್ರದ ಪಿತಾಮಹ ಪ್ರೊ.ಪಿ.ಸಿ.ಮಹಾಲನೋಬಿಸ್ರವರ 125ನೇ ಜನ್ಮ ದಿನಾಚರಣೆ ಹಾಗೂ 13ನೇ ಸಾಂಖ್ಯಿಕ ದಿನಾಚರಣೆಯನ್ನಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಜೂನ್ 29 ರಂದು ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಡಾ|| ಪ್ರೊ ಪ್ರಶಾಂತ್ ಉಪನ್ಯಾಸಕರು ಕೆನರಾ ಕಾಲೇಜು ಮಂಗಳೂರು ಇವರು “ಸುಸ್ಥಿರ ಅಭಿವೃದ್ಧಿ ಗುರಿ”ಗಳ ಕುರಿತು ಹಸಿವು, ಬಡತನ, ಆರೋಗ್ಯ , ಶಿಕ್ಷಣ, ನಿರುದ್ಯೋಗ ಮುಂತಾದ ಇನ್ನೂ 17 ಅಂಶಗಳ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸೈಂಟ್ ಫಿಲೋಮಿನ ಪದವಿ ಪೂರ್ವ ಕಾಲೇಜು ಪುತ್ತೂರು ಹಾಗೂ ಎಸ್‍ಡಿಎಮ್ ಪದವಿ ಪೂರ್ವ ಕಾಲೇಜು ಉಜಿರೆ, ಬೆಳ್ತಂಗಡಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಾ|| ಉದಯ ಶೆಟ್ಟಿಯವರು ಪ್ರೊ. ಪಿ.ಸಿ.ಮಹಾಲನೋಬಿಸ್‍ರವರ ಕುರಿತು ಸಂಕ್ಷಿಪ್ತ ವಿವರಣೆ ನೀಡಿದರು. ಮುಖ್ಯ ಅತಿಥಿಯಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜಾóರವರು ಜನಗಣತಿ, ಆರ್ಥಿಕ ಗಣತಿ ಮಳೆಪ್ರಮಾಣ ಸೇರಿದಂತೆ ವಿವಿಧ ಇಲಾಖೆಗಳ ಮಾಹಿತಿಗಾಗಿ ಜಿಲ್ಲಾಡಳಿತವು ಸಂಖ್ಯಾ ಸಂಗ್ರಹಣಾಧಿಕಾರಿಯವರ ಇಲಾಖೆಯನ್ನು ಅವಲಂಬಿಸಿದೆ. ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಸರಿಯಾದ ಅಂಕಿ ಅಂಶವನ್ನು ಒದಗಿಸಬೇಕೆಂದು ಸಲಹೆ ನೀಡಿದರು. ಜಿಲ್ಲಾ ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ದ.ಕ ಜಿಲ್ಲಾ ಪಂಚಾಯತ್ ಗಣಪತಿ ಭಟ್ ಇವರು ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಹಾಯಕ ಸಾಂಖ್ಯಿಕ ಅಧಿಕಾರಿ ಮಾರುತಿ ಪ್ರಸಾದ್, ಕಾರ್ಯಕ್ರಮವನ್ನು ನಿರೂಪಿಸಿದರು ಎಚಿದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.