ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಕೋರ್ಸುಗಳ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನಲ್ಲಿ 02 ವರ್ಷಗಳ ಐಟಿಐ / ದ್ವಿತೀಯ ಪಿಯುಸಿ(ವಿಜ್ಞಾನ)/ ದ್ವಿತೀಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸೆಲಿಂಗ್ ಮೂಲಕ ಅರ್ಜಿಗಳನ್ನು ಅಪ್‍ಲೋಡ್ ಮಾಡುವ ಅವಧಿಯನ್ನು ಜುಲೈ 6 ರಂದು ಸಂಜೆ 5.30 ಗಂಟೆಯವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ  www.dte.kar.nic.in ವೆಬ್ ಸೈಟ್‍ನ್ನು ನೋಡಬಹುದು.ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ 0824-2211636ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಅತ್ಯಾಧುನಿಕ ಸಿಗ್ನಲ್ ಅಳವಡಿಕೆ ಕಾಮಗಾರಿ ಪೂರ್ಣ

error: Content is protected !!
Scroll to Top