ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019ನೇ ಜುಲೈ ಮಾಹೆಯಲ್ಲಿ ನಡೆಯಲಿರುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರಗಳು ಇಂತಿವೆ:


ಜುಲೈ 5 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಜುಲೈ 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಜುಲೈ 10 ರಂದು ಸರ್ಕಾರಿ ಆರೋಗ್ಯ ಕೇಂದ್ರ ಕಡಬ, ಜುಲೈ 12 ರಂದು ತಾಲೂಕು ಆಸ್ಪತ್ರೆ ಬಂಟ್ವಾಳ, ಜುಲೈ 15 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, ಜುಲೈ 16 ರಂದು ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಆಸ್ಪತ್ರೆ ಸುಳ್ಯ, ಜುಲೈ 17 ರಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಪುತ್ತೂರು, ಜುಲೈ 23 ರಂದು ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆ, ಜುಲೈ 24 ರಂದು ಸರ್ಕಾರಿ ಆರೋಗ್ಯ ಕೇಂದ್ರ ವಿಟ್ಲ ಮತ್ತು ಮಾಣಿ ಇಲ್ಲಿ ನಡೆಯಲಿದೆ. ಪ್ರತಿ ವಾರದ ಬುಧವಾರ, ಗುರುವಾರದಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಉದರದರ್ಶಕ ಹಾಗೂ ಪ್ರತಿ ದಿನ (ರಜಾ ದಿನ ಹೊರತುಪಡಿಸಿ) ಟ್ಯುಬೆಕ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಏಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ - ಆಂಟನಿ ಬ್ಲಿಂಕನ್ ಭೇಟಿ

error: Content is protected !!
Scroll to Top