ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು ಶ್ರಮಿಸಿದ ➤ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಯಕ್ಷಗಾನವನ್ನು ಪ್ರೀತಿಸಿ, ಅದರ ಉಳಿವು ಬೆಳವಿಗೆ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ಶ್ರಮಿಸಿದ ಹಾಗೂ ಸೀಮಿತ ಪ್ರದೇಶದಲ್ಲಿ ಮಾತ್ರ ಪರಿಚಯಗೊಂಡ ಹಿರಿಯ ಕಲಾವಿದರನ್ನು ಹಾಗೂ ಯಕ್ಷಗಾನಕ್ಕೆ ಅವರು ನೀಡಿರುವ ಕೊಡುಗೆಗಳನ್ನು ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಹಿರಿಯರ ನೆನಪು ಶೀರ್ಷಿಕೆಯ ಹಿರಿಯ ಕಲಾವಿದರ ಸಂಸ್ಮರಣಾ ಕಾರ್ಯಕ್ರಮವನ್ನು ನಡೆಸುವ ವಿಭಿನ್ನ ಯೋಜನೆಯೊಂದನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಕಾರ್ಯಕ್ರಮ ನಡೆಸಲು ಸಂಸ್ಥೆಗೆ ರೂ 10,000 ಗಳನ್ನು ನೀಡಲಾಗುವುದು.

ಹೆಚ್ಚಿನ ವೆಚ್ಚಗಳನ್ನು ಸಂಸ್ಥೆಯವರೇ ವಹಿಸಿಕೊಳ್ಳಬೇಕು. ಒಂದು ಕಾರ್ಯಕ್ರಮದಲ್ಲಿ ಹಲವರು ಕಲಾವಿದರನ್ನು ಕುರಿತು ಒಂದೇ ಸಂಸ್ಕರಣಾ ಕಾರ್ಯಕ್ರಮವನ್ನು ನಡೆಸಬಹುದು.ಹಿರಿಯರ ನೆನಪು ಸಂಸ್ಕರಣಾ ಕಾರ್ಯಕ್ರಮವನ್ನು ನಡೆಸಲು ಆಸಕ್ತಿಯಿರುವ ಕಲಾಸಂಸ್ಥೆಗಳು ತಮ್ಮ ಪೂರ್ಣ ವಿಳಾಸದೊಂದಿಗೆ (ದೂರವಾಣಿ/ ಮೊಬೈಲ್ ಸಂಖ್ಯೆಯೊಂದಿಗೆ) ಮನವಿಯನ್ನು ಜುಲೈ 25 ರೊಳಗಾಗಿ ರಿಜಿಸ್ಟಾರ್ ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, 2 ನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ ರಸ್ತೆ ಬೆಂಗಳೂರು 560002 ಇಲ್ಲಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ದೂರವಾಣಿ ಸಂಖ್ಯೆ: 080-22113146 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅಧ್ಯಕ್ಷರು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ: ವಿದ್ಯುತ್ ಶಾಕ್ ➤ ಯುವಕ ಮೃತ್ಯು

error: Content is protected !!
Scroll to Top