ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ‌ ಎಸಗಿದ್ದಲ್ಲದೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳು ಸೇರಿ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಮಲು ಪದಾರ್ಥ ನೀಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಈ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದು, ಅದೀಗ ವೈರಲ್‌ ಆಗಿದೆ.

Also Read  ಟ್ರಕ್ ಟ್ರೇಲರ್ ಮತ್ತು ವ್ಯಾನ್ ನಡುವೆ ಅಪಘಾತ ➤ 26 ಮಂದಿ ಮೃತ್ಯು

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ತನಿಖೆಗೆ ಆದೇಶಿಸಿದ್ದಾರೆ.

error: Content is protected !!
Scroll to Top