ಸರಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಆ.11. ನಗರದ ಭೂತನಾಳ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತ ವಿದ್ಯಾರ್ಥಿಯನ್ನು ಯಾದಗಿರ ಜಿಲ್ಲೆಯ ಸುರಪುರ ತಾಲೂಕಿನ ಚಂದಾಪುರ ಎಲ್ ಟಿ ನಿವಾಸಿ ಶಂಕರ್ ತಿಪ್ಪಣ್ಣ ರಾಠೋಡ್(19) ಎಂದು ಗುರುತಿಸಲಾಗಿದೆ. ಈತ ಸುರಪುರದಲ್ಲಿ ಡಿಎಡ್ ಓದುತ್ತಿದ್ದು, ಎರಡು ದಿನಗಳ ಹಿಂದೆ ಆತನ ಸ್ನೇಹಿತನನ್ನು ಭೇಟಿಯಾಗಲು ಬಂದು ನಿನ್ನೆ ರಾತ್ರಿ ಹಾಸ್ಟೇಲ್ ನಲ್ಲೇ ಸ್ನೇಹಿತರೊಂದಿಗೆ ಉಳಿದುಕೊಂಡಿದ್ದ ಎನ್ನಲಾಗಿದೆ. ಶಂಕರ್ ಸಾವಿಗೆ ನಿಖರವಾದ ಮಾಹಿತಿ ತಿಳಿದುಬಂದಿಲ್ಲ.

Also Read  ಕನ್ನಡ ಪುಸ್ತಕ ಪ್ರಾಧಿಕಾರ - ಪುಸ್ತಕಗಳು ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯ

ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ‌.

error: Content is protected !!
Scroll to Top