(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರದಂದು ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಯೋರ್ವಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಹುಡುಗಿಯ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಪ್ರಸಾರವಾಗುತ್ತಿದ್ದು, ಇಂತಹ ಮಾಹಿತಿಗಳನ್ನು ಪ್ರಸಾರಪಡಿಸುವುದು ಕಾನೂನಿನ ಉಲ್ಲಂಘನೆಯಾಗಿರುತ್ತದೆ.
ಅತ್ಯಾಚಾರದ ವೀಡಿಯೊವನ್ನು ವಾಟ್ಸ್ಅಪ್ ಮೂಲಕ ಪ್ರಸಾರ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸು-ಮೋಟು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ. ಉಲ್ಲೇಖಿತ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಮತ್ತು ಮೊಬೈಲ್ ಫೋನ್ ಅಥವಾ ಕಂಪ್ಯೂಟರ್‌ಗಳಲ್ಲಿ ಉಳಿಸಬಾರದು ಎಂದು ಸಾರ್ವಜನಿಕರಲ್ಲಿ ಕೋರುತ್ತಿದ್ದು, ನಿಯಮವನ್ನು ಉಲ್ಲಂಘಿಸಿದ್ದಲ್ಲಿ ವಾಟ್ಸ್ಅಪ್ ಗ್ರೂಪಿನ ಅಡ್ಮಿನ್ ಸೇರಿದಂತೆ ಶೇರ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.