(ನ್ಯೂಸ್ ಕಡಬ) newskadaba.com ಪುತ್ತೂರು, ಜು.04. ನೆಟ್ಲ ಮುಡ್ನೂರು – ಪುತ್ತೂರು 110 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ನಿಯತಕಾಲಿಕ ಪಾಲನಾ ಕಾರ್ಯವು ನಡೆಯಲಿರುವುದರಿಂದ ಇಂದು ಪೂರ್ವಾಹ್ನ 10.30ರಿಂದ ಅಪರಾಹ್ನ 2.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜು ಆಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪುತ್ತೂರು ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.