ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ ➤ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಘಟನೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜು.04. ಕಾರ್ಕಳದ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನ ಹೊಂದಿದರು.





ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಮಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಬಸ್ ಮಂಗಳೂರಿನ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದಾರೆ. ಪೊಲೀಸರು ಆಗಮಸಿ ಪರಿಶೀಲಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.






error: Content is protected !!
Scroll to Top