ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ – News Kadaba

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88 ಸದಸ್ಯ ಬಲದ ಆಡಳಿತಾರೂಢ ಬಿಜೆಪಿಯ 56 ಮಂದಿ ಮಾತ್ರ ಹಾಜರಿದ್ದರು. ಆದರೆ ವಿರೋಧ ಪಕ್ಷದ 74 ಸದಸ್ಯರ ಪೈಕಿ 52 ಮತಗಳು ಲಭಿಸಿತ್ತು. ಇದರಿಂದ ಸರ್ಕಾರ ಮುಜುಗರಕ್ಕೆ ಒಳಗಾಗಿತ್ತು. ಈ ಕಾರಣಕ್ಕೆ ಮೋದಿ ಈಗ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

Scroll to Top