ಉದ್ಯೋಗಸ್ಥ ಮಹಿಳೆಯರ ಹಾಸ್ಟೆಲ್‍ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮಂಗಳಗಂಗೋತ್ರಿಯಲ್ಲಿರುವ ಉದ್ಯೋಗಸ್ಥ ಮಹಿಳೆಯರ ವಸತಿನಿಲಯಕ್ಕೆ ಪ್ರವೇಶ ಪಡೆಯಲು ಉದ್ಯೋಗಸ್ಥ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.


ಪ್ರವೇಶ ಪಡೆಯಲು ಹೊಂದಿರಬೇಕಾದ ಅರ್ಹತೆ ಹಾಗೂ ಪ್ರವೇಶ ಶುಲ್ಕಕ್ಕೆ ಸಂಬಂಧಿಸಿದ ಮಾಹಿತಿಯನ್ನು ವಸತಿನಿಲಯದ ಕಚೇರಿ ದೂರವಾಣಿ ಸಂಖ್ಯೆ: 0824-2287642 ಇಲ್ಲಿಂದ ಪೂರ್ವಾಹ್ನ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪಡೆಯಬಹುದು ಎಂದು ನಿಲಯಪಾಲಕರು ಉದ್ಯೋಗಸ್ಥ ಮಹಿಳೆಯರ ವಸತಿನಿಲಯ ಮಂಗಳಗಂಗೋತ್ರಿ ಇವರ ಪ್ರಕಟಣೆ ತಿಳಿಸಿದೆ.

Also Read  ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು

error: Content is protected !!
Scroll to Top