ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಕ್ರಮ ➤ ಜು. 18 ರಂದು ಸಭೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಶಾಲಾ / ಕಾಲೇಜು ವಿದ್ಯಾರ್ಥಿಯರ ದೌರ್ಜನ್ಯ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ಸುರಕ್ಷತೆಯ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಸಭೆಯನ್ನು ಆಯೋಜಿಸಲಾಗಿದೆ.







ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಮಹಿಳೆಯರ ಬಗ್ಗೆ ಗೌರವ ಮತ್ತು ಉತ್ತಮ ಪ್ರಜ್ಞೆ ಬೆಳೆಸುವ ವಿಚಾರದಲ್ಲಿ ಶಾಲಾ ಮುಖ್ಯಸ್ಥರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಶಾಲಾ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ / ಶಾಲಾ ಕಾಲೇಜು ಹಾಸ್ಟೆಲ್‍ಗಳಲ್ಲಿ ಇರುವ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಇಂದು  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ.






error: Content is protected !!
Scroll to Top