(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜುಲೈ.8.ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ 14 ಶಾಸಕರು ರಾಜೀನಾಮೆ ಕೊಡುವ ಮೂಲಕ ರಾಜ್ಯ ಸರ್ಕಾರಕ್ಕೆ ಅಲ್ಪಬಹುಮತಕ್ಕೆ ಇಳಿದಿದೆ.ನಮ್ಮ ಭಾರತೀಯ ಜನತಾ ಪಕ್ಷ ಯಾವುದೇ ಶಾಸಕರಿಗೆ ರಾಜೀನಾಮೆ ನೀಡಿ ಎಂದು ಒತ್ತಡ ಹೇರಿಲ್ಲ.
ರಾಜೀನಾಮೆ ಪರ್ವ ಆರಂಭಿಸಿದ್ದು ರಾಹುಲ್ ಗಾಂಧಿ ಎಂದು ತಿರುಗೇಟು ನೀಡಿದ್ದಾರೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂಬ ಕಾಂಗ್ರೆಸ್ ಸಂಸದರ ಆರೋಪಕ್ಕೆ ರಾಜನಾಥ್ ಈ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ರಾಜಕಾರಣದ ರಾಜೀನಾಮೆ ಪರ್ವ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದು, ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ ಹಿಂದೆ ಬಿಜೆಪಿ ಕೈವಾಡವಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.