ಸಂಗೀತ ನೃತ್ಯ ತರಬೇತಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.10.ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20ನೇ ಸಾಲಿಗೆ ಶಿಷ್ಯವೇತನದ ಬದಲಾಗಿ, ಸಂಗೀತ ಹಾಗೂ ನೃತ್ಯವನ್ನು ಕಲಿಯಲು ಅವಕಾಶ ಕಲ್ಪಿಸಿದೆ.

ಆದ್ದರಿಂದ  ಅಕಾಡೆಮಿ ವತಿಯಿಂದ ಪ್ರತಿಯೊಂದು ಜಿಲ್ಲೆಯಲ್ಲಿ(ಅರ್ಜಿಗಳನ್ನಾಧರಿಸಿ) ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ ಕಥಾಕೀರ್ತನ; ಗಮಕ ಕಲಾಪ್ರಕಾರಗಳಲ್ಲಿ-ಕಲಿಯಲು ಆಸಕ್ತಿಯುಳ್ಳ/ಅಭ್ಯಾಸ ಮಾಡುತ್ತಿರುವ / ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 5 ತಿಂಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

14ರಿಂದ 26 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ (ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆವರೆಗೆ) ಅಲ್ಲದೇ ಅಕಾಡೆಮಿ ಅಂರ್ತಜಾಲತಾಣ  www.karnatakasangeetanrityaacademy.com  ಮೂಲಕ ಪಡೆದು ಸಲ್ಲಿಸಬಹುದಾಗಿದೆ. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ಜುಲೈ 20 ರ ಒಳಗಾಗಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್.ಜಿ. ಇವರ ಪ್ರಕಟಣೆ ತಿಳಿಸಿದೆ.

Also Read  ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

error: Content is protected !!
Scroll to Top