ರೈಲಿನಡಿಗೆ ತಲೆ ಇಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.12: ತಾಯಿಯ ಅನಾರೋಗ್ಯದಿಂದ ಬೇಸತ್ತು, ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ಪತ್ರ ಬರೆದಿಟ್ಟು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಇಂದ್ರಾಳಿ ಬಳಿ ಶುಕ್ರವಾರ ರಾತ್ರಿ ವೇಳೆಯಲ್ಲಿ ನಡೆದಿದ್ದು, ಶನಿವಾರ ಕಂಡುಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿಟ್ಟೂರಿನ ಪ್ರತೀಕ್ ಕುಮಾರ್ (22) ಎಂದು ಗುರುತಿಸಲಾಗಿದೆ. ಎಂದಿನಂತೆ ನಿನ್ನೆ ಸಂಜೆ 6:30ಕ್ಕೆ ಕೆಲಸ ಮುಗಿಸಿ ಮನೆಗೆ ಬಂದ ಪ್ರತೀಕ್ ಆ ಬಳಿಕ ನಾಪತ್ತೆಯಾಗಿದ್ದ. ಮನೆಯವರು ಹುಡುಕಾಡಿದ ಬಳಿಕ ಆತನ ಮೃತದೇಹ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪದ ರೈಲು ಹಳಿಯಲ್ಲಿ ಪತ್ತೆಯಾಗಿದ್ದು, ರೈಲಿನಡಿಗೆ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Scroll to Top