ರಾಜಭವನಕ್ಕೆ ಮುತ್ತಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರು ➤ ಮುತ್ತಿಗೆ ಯತ್ನವನ್ನು ವಿಫಲಗೊಳಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.10.ಬುಧವಾರ ಮಧ್ಯಾಹ್ನ ರಾಜಭವನಕ್ಕೆ ಮುತ್ತಿಗೆ ಹಾಕಿ ಕಾಂಗ್ರೆಸ್‌ ನಾಯಕರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.  ಶಾಸಕರನ್ನು ಸೆಳೆದು ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಾದ.

ಆದ್ದರಿಂದ ರಾಜಭವನಕ್ಕೆ ಮುತ್ತಿಗೆಹಾಕಿ ಪ್ರತಿಭಟನೆಗೆ ಮುಂದಾದರು. ಕಾಂಗ್ರೆಸ್ ನಾಯಕರನ್ನು ತಡೆದು ಪ್ರತಿಭಟನೆಯನ್ನು  ಪೊಲೀಸರು ವಿಫ‌ಲಗೊಳಿಸಿದ್ದಾರೆ.ಕಾಂಗ್ರೆಸ್‌ ನ ಉಸ್ತುವಾರಿ ವೇಣುಗೋಪಾಲ್‌, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ಮೆರವಣಿಗೆ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು.ಬ್ಯಾರಿಕೇಡ್‌ಗಳನ್ನು ಹಾಕಿ ಮೆರವಣಿಗೆಗೆ ತಡೆ ಒಡ್ಡಿದ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.ಪ್ರತಿಭಟನೆಗೆ ಪೊಲೀಸರು ತಡೆ ಒಡ್ಡಿದ ಕಾರಣಕ್ಕೆ ರಾಜಭವನ ರಸ್ತೆಯಲ್ಲಿಯೆ ಕುಳಿತು ಕಾಂಗ್ರೆಸ್‌ ನಾಯಕರು ಪ್ರತಿಭಟನೆ ಮುಂದುವರಿಸಿದ್ದಾರೆ.

Also Read  ಹೋಟೆಲ್ ಮಾಲಕ ನಾಪತ್ತೆ - ಪ್ರಕರಣ ದಾಖಲು

error: Content is protected !!
Scroll to Top