ಲೋಕಾಯುಕ್ತರ ಭೇಟಿ ➤ ದೂರು ಅರ್ಜಿ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ವಿವಿಧ ದಿನ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸುವರು.

ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಜುಲೈ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಂಗಳೂರು ತಹಶೀಲ್ದಾರರ ಕಚೇರಿ, ಜುಲೈ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಹಶೀಲ್ದಾರರ ಕಚೇರಿ, ಜುಲೈ 24 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿ, ಜುಲೈ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳ ತಾಲೂಕು ಕಚೇರಿ, ಜುಲೈ 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ, ಜುಲೈ 30 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಪುತ್ತೂರು ಇಲ್ಲಿ ನಡೆಯಲಿದೆ.

Also Read  ಬಂಟ್ವಾಳ: ಕಲ್ಲಿನ ಕೋರೆಯಲ್ಲಿ ಸ್ಫೋಟಕ ಬಳಕೆ- ಸಾರ್ವಜನಿಕರಿಂದ ದೂರು ➤ ತಹಶೀಲ್ದಾರ್ ದಾಳಿ

ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬಹುದು.ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ I & IIರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ:0824-2429197, 9448390987, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ:0824-2453420, 9886542369 ಸಂಪರ್ಕಿಸಲು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ...!!!

error: Content is protected !!
Scroll to Top