ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಜಿಲ್ಲಾಡಳಿತ ದ.ಕ ಜಿಲ್ಲೆ, ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸ್ಮಾರ್ಟ್ ಸಿಟಿ ಲಿ., ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ , ಭಾರತ್ ಸ್ಕೌಟ್ ಎಂಡ್ ಗೈಡ್ಸ್ ದ.ಕ ಜಿಲ್ಲೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ-2019, ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಇಂದು ನಡೆಯಲಿದೆ. ಪರಿಸರ ಜಾಥಾ ಬೆಳಿಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಿಂದ ಆರಂಭವಾಗಿ, ಬೆಳಿಗ್ಗೆ 10 ಗಂಟೆಗೆ ಟಿ.ಎಂ.ಎ. ಪೈ ಕನ್ವೆನ್ಷನ್ ಹಾಲ್‍ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಕಾರ್ಯಕ್ರಮ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಮಾಡಿಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಲಿದ್ದಾರೆ.

Also Read  ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆ ಆರಂಭ

error: Content is protected !!
Scroll to Top