ಕುಂತೂರು ➤ ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕೀರ್ಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕುಂತೂರು, ಜುಲೈ.12.ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಹಾಗೂ ಮಾರ್ ಇವಾನಿಯೋಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ “Are you the fruit of all Seasons ” ಎಂಬ ಶಿರ್ಷಿಕೆಯಡಿಯಲ್ಲಿ ವಿಚಾರ ಸಂಕೀರ್ಣ ಕಾರ್ಯಕ್ರಮ ನಡೆಸಲಾಯಿತು.


ಶಿಕ್ಷಕ ವಿದ್ಯಾರ್ಥಿಗಳು ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನಕ್ಕಾಗಿ ಮೌಲ್ಯಗಳನ್ನು ಕುರಿತಂತೆ ಕಾಲೇಜಿನ ಸಂಚಾಲಕರಾದ ರೆ/ಫಾ/ಡಾ/ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ಗದರ್ಶನವನ್ನು ನೀಡಿದರು.ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಂಧರ್ಭದಲ್ಲಿ ಜ್ಞಾನಾರ್ಜನೆಯ ಜೊತೆಗೆ ಉತ್ತಮ ಜೀವನ ಮೌಲ್ಯವನ್ನು ಅಳವಡಿಸಿಕೊಂಡು ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡುವಂತಹ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂಬುದಾಗಿ ಸಲಹೆಯನ್ನು ನೀಡಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರಿಮತಿ ಉಷಾ ಎಮ್. ಎಲ್ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಧಿತರಿದ್ದರು.

Also Read  ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾಗುತ್ತಿದ್ದಾರೆಂಬ ಆರೋಪ ► ಎಸ್ಡಿಪಿಐ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ

error: Content is protected !!
Scroll to Top