ಇಂದು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ➤ ‘ಸರ್ಜಿಕಲ್ ಸ್ಟ್ರೈಕ್’ ಖ್ಯಾತಿಯ ಪತ್ರಕರ್ತೆ ವಿಜಯಲಕ್ಷ್ಮೀ ಶಿಬರೂರು ಕಡಬಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.13. ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣಾ ಕಾರ್ಯಕ್ರಮವು
ಜುಲೈ 13 ನೇ ಶನಿವಾರ ಕಡಬದ ವಿದ್ಯಾನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ನಡೆಯಲಿದೆ.

ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೆಶಕ ವೈ.ಶಿವರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪುತ್ತೂರು ಉಪವಿಭಾಗದ ಪೋಲೀಸ್ ಉಪಧೀಕ್ಷಕ ದಿನಕರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ‘ಸರ್ಜಿಕಲ್ ಸ್ಟ್ರೈಕ್’ ತನಿಖಾ ವರದಿ ಖ್ಯಾತಿಯ ಪರ್ತಕರ್ತೆ ವಿಜಯಲಕ್ಷ್ಮೀ ಶಿಬರೂರು ಪ್ರಮುಖ ಭಾಷಣ ಹಾಗೂ ಸಂವಾದ ಕಾರ್ಯಕ್ರಮ ನೆರವೇರಿಸಲಿದ್ದಾರೆ. ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸರಸ್ವತೀ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ ಹಾಗೂ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Also Read  ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಸರಳ ಶ್ರೀಕೃಷ್ಣಾಷ್ಟಮಿ

ಈ ಸಂದರ್ಭದಲ್ಲಿ ವಿಜಯಲಕ್ಷ್ಮೀ ಶಿಬರೂರು ಹಾಗೂ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊೈಲ ಹಾಗೂ ಕಾರ್ಯದರ್ಶಿ ನಾಗರಾಜ್ ಎನ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top