ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ಎಸ್.ಎಸ್.ಎಲ್.ಸಿ./ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 30 ಆಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ಅನ್ನು ನೋಡುವುದು. ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆಯಿಂದ `ಯೆಲ್ಲೊ' ಅಲರ್ಟ್ ಘೋಷಣೆ

error: Content is protected !!
Scroll to Top