ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಲೇರಿಯಾ ಹಾಗೂ ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಯೂ ಕಾರ್ಮಿಕರಿಂದ ನಿರಂತರ ಸಮಿಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿರವರು ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು.


ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್.ವಿ.ಬಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಪ್ರಯುಕ್ತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಶಾಲಾ ಮತ್ತು ಅಂಗನವಾಡಿ ಕಟ್ಟಡಗಳ ಸುತ್ತಮುತ್ತ ತುಂಬಾ ಸ್ವಚ್ಚತೆಯ ಬಗ್ಗೆ ಕಾಳಜಿ ವಹಿಸಿ ಮತ್ತು ಗುಜರಿ ಅಂಗಡಿಗಳ ಪ್ರದೇಶದಲ್ಲಿ ಸ್ವಚ್ಚತೆಯ ಕಾಪಾಡಿಕೊಳ್ಳಬೇಕು. ಇಲ್ಲವಾದಲ್ಲಿ ದಂಡ ವಿಧಿಸಬೇಕು.

Also Read  ರಾಜ್ಯಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರ ► ತರಬೇತುದಾರರಾಗಿ ಕಡಬದ ಗಣೇಶ್ ಇಡಾಳ

ಅತೀ ಹೆಚ್ಚು ಮಲೇರಿಯಾ ಹಾಗೂ ಡೆಂಗ್ಯೂ ವರದಿಯಾಗಿರುವ ಪ್ರದೇಶಗಳಿಗಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳು ನಿರಂತರ ಭೇಟಿ ನೀಡಿ ಅದರ ನಿಯಂತ್ರಣದ ಬಗ್ಗೆ ಕ್ರಮಕೈಗೊಳ್ಳಿ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಿಕಂದರ್ ಪಾಷಾ, ಡಿಡಿಪಿಐ ವೈ. ಶಿವರಾಮಯ್ಯ ಹಾಗೂ ವಿವಿಧ ಇಲಾಖೆಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

error: Content is protected !!
Scroll to Top