ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ➤ ಜಿಲ್ಲೆಯಾದ್ಯಂತ ರೆಡ್ ಅಲೆರ್ಟ್ ಘೋಷಣೆ ➤ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರದಂದು ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.19. ಕರ್ನಾಟಕದ ಕರಾವಳಿ ಭಾಗದಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ಹೊರಡಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶನಿವಾರದಿಂದ ಸೋಮವಾರದವರೆಗೆ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

Also Read  'ರದ್ದಾದ ಮೂರು ಕೃಷಿ ಕಾನೂನುಗಳನ್ನು ಸರ್ಕಾರ ಮತ್ತೆ ಜಾರಿಗೆ ತರಬೇಕು'- ಕಂಗನಾ ರಣಾವತ್

error: Content is protected !!
Scroll to Top