➤➤ Big Breaking News ಬಂಟ್ವಾಳ: ಕಾರು – ಟ್ಯಾಂಕರ್ ನಡುವೆ ಢಿಕ್ಕಿ ➤ ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.19. ಕಾರು ಮತ್ತು ಗ್ಯಾಸ್ ಟ್ಯಾಂಕರ್‌ ನಡುವೆ ಅಪಘಾತವುಂಟಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮಧ್ಯಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಸಮೀಪ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶೆವರ್ಲೆಟ್ ಟವೇರಾ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಟ್ಯಾಂಕರ್‌ ನಡುವೆ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಸಮೀಪದ ರಾಮಲ್‌ ಕಟ್ಟೆ ಬಳಿ ಢಿಕ್ಕಿ ಉಂಟಾಗಿದ್ದು, ಘಟನೆಯ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top