ಭಾರತೀಯ ಹವಾಮಾನ ಇಲಾಖೆ ➤ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಭಾರತೀಯ ಹವಾಮಾನ ಇಲಾಖೆಯವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ ಸೂಚನೆ ನೀಡಿದೆ.

ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಂಭವವಿರುವುದರಿಂದ ಜುಲೈ 20 ರಿಂದ 22 ರವರೆಗೆ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top