(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಸಹಾಯಧನ ಒದಗಿಸಲಾಗುವುದು.
ಶೇ. 50 ರಷ್ಟು ಸಹಾಯಧನದೊಂದಿಗೆ 2019-20 ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ ಖರೀದಿಸಲು ಶೇ. 50 ರಷ್ಟು ಸಹಾಯಧನ ಒದಗಿಸಲಾಗುವುದು. ಫಲಾನುಭವಿಯು ಕರ್ನಾಟಕ ರಾಜ್ಯದ ನಿವಾಸಿಯಗಿದ್ದು ಸ್ವಂತ/ಲೀಸ್/ಬಾಡಿಗೆ ಮನೆ ಹೊಂದಿದ್ದು, ಜವಳಿ ನೀತಿಯಡಿ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಮಹಿಳೆಯಾಗಿರಬೇಕು.
ಮನೆಯಲ್ಲಿ ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ ಅಳವಡಿಸಲು ಅವಶ್ಯವಿರುವ ವಿದ್ಯುತ್ ಸಂಪರ್ಕ ಹೊಂದಿರಬೇಕು. ಘಟಕ ಸ್ಥಾಪಿಸಲು ಬ್ಯಾಂಕಿನಿಂದ ಸಾಲ ಪಡೆದು ಅಥವಾ ಸ್ವಂತ ಬಂಡವಾಳದೊಂದಿಗೆ ಘಟಕ ಸ್ಥಾಪಿಸಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ ಸರ್ಕಾರದ ಸಹಾಯಧನಕ್ಕೆ ಪ್ರಸ್ತಾವನೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಯೆಯ್ಯಾಡಿ, ಮಂಗಳೂರು ದೂರವಾಣಿ ಸಂಖ್ಯೆ: 0824-2225056/9481628584 ಸಂಪರ್ಕಿಸಲು ಕೈಮಗ್ಗ ಮತ್ತು ಜವಳಿ ಇಲಾಖೆ, ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.