ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ➤ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಆಫ್ ಲೈನ್ ಮುಖಾಂತರ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.2019-20ನೇ ಸಾಲಿಗೆ 02 ವರ್ಷಗಳ ಐ.ಟಿ.ಐ/ದ್ವೀತಿಯ ಪಿಯುಸಿ (ವಿಜ್ಞಾನ)/ದ್ವೀತಿಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ.

ಇದಕ್ಕೆ ಸಂಬಂಧಪಟ್ಟಂತೆ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು www.dte.kar.nic.in ಮೂಲಕ ಡೌನ್‍ಲೋಡ್ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 30 ಸಂಜೆ 5.30 ಗಂಟೆಗೆ, ಲ್ಯಾಟರಲ್ ಎಂಟ್ರಿ ಅಭ್ಯರ್ಥಿಗಳ ಆಫ್ ಲೈನ್ ಕೌನ್ಸೆಲಿಂಗ್ ಜುಲೈ 31 ಮಧ್ಯಾಹ್ನ 2.30 ಗಂಟೆಗೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ದೂರಾವಾಣಿ ಸಂಖ್ಯೆ; 0824-2211636ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

error: Content is protected !!
Scroll to Top