ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಗ್ರೂಪ್ ‘ಡಿ’ ನೌಕರರ ಮಕ್ಕಳಿಗೆ ➤ ಪ್ರತಿಭಾ ಪುರಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.23.ಜುಲೈ 13 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ‘ಡಿ’ ಗ್ರೂಪ್ ನೌಕರರ ಸುಮಾರು 28 ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ 2018-19 ನೇ ಸಾಲಿನ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ್ದು, ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪ್ರಾಂಕಿ ಪ್ರಾನ್ಸಿಸ್ ಕುಟ್ಹಿನ ವಹಿಸಿದ್ದರು. ಜಿಲ್ಲಾ ಸರ್ಜನ್ ಡಾ|| ರಾಜೇಶ್ಚರಿ ಅವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಪ್ರಸನ್ನ ಕುಮಾರ್, ಕೃಷಿ ಮಾರುಕಟ್ಟೆ ಅಧಿಕಾರಿ ಶಾಮಂತ್ ಶೆಟ್ಟಿ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್, ಉಪಾಧ್ಯಕ್ಷ ಆಗ್ನೇಲ್ ಪಿಂಟೋ, ರಾಜ್ಯ ಸರಕಾರಿ ಗ್ರೂಪ್ ‘ಡಿ’ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಶಿವರಾಜ್ ಮತ್ತಿತರರು ಭಾಗವಹಿಸಿದ್ದರು.
ಕಾರ್ಯಕ್ರಮ ನಿರೂಪಣೆಯನ್ನು ತೋಟಗಾರಿಕೆ ಇಲಾಖೆ ಸಹಾಯಕ ಸಿರಿಲ್ ರಾಬರ್ಟ್ ಡಿ’ಸೋಜ ಹಾಗೂ ಮೋಹನ್ ಶಿರ್ಲಾಲು ಜಂಟಿಯಾಗಿ ನಿರ್ವಹಿಸಿದರು.

Also Read  ‘ಕನ್ನಡ ಪುಸ್ತಕಗಳಿಂದ ಬೌದ್ದಿಕ ಶ್ರೀಮಂತಿಕೆ’

error: Content is protected !!
Scroll to Top