ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ – News Kadaba

ಅಮಿತ್ ಷಾ ಅಲ್ಲ, ಮೋದಿ ಬಂದರೂ ಭಯವಿಲ್ಲ: ಸಿದ್ಧರಾಮಯ್ಯ ► ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ

(ನ್ಯೂಸ್ ಕಡಬ) newskadaba.com ಗುಲ್ಬರ್ಗ, ಆ.13. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಬಂದು ಕರ್ನಾಟಕದಲ್ಲಿ ಠಿಕಾಣಿ ಹೂಡಿದರೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಭಾನುವಾರದಂದು ಸುದ್ದಿಗಾರರೊಂದಿಗೆ ಮಾತನಾಡಿ, ಅಮಿತ್ ಶಾ, ನರೇಂದ್ರ ಮೋದಿ ಇಬ್ಬರೂ ಇಲ್ಲೇ ಬಂದು ಠಿಕಾಣಿ ಹೂಡಿದರೂ ನಮಗೆ ಯಾವುದೇ ಭಯವಿಲ್ಲ. ಮುಂದಿನ ಬಾರಿಯೂ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅವಧಿಗೆ ಮುನ್ನ ಚುನಾವಣೆ ನಡೆಯುವುದಿಲ್ಲ. ನಮ್ಮ ಅಧಿಕಾರ ಅವಧಿಯನ್ನು ಪೂರ್ಣಗೊಳಿಸುತ್ತೇವೆ ಎಂದ ಅವರು, ಬಿಜೆಪಿಯವರು ರಾಜ್ಯದ ಜನರನ್ನು ದಿಕ್ಕು ತಪ್ಪಿಸಲು ವಿನಾಕಾರಣ ಗೊಂದಲಗಳನ್ನು ಸೃಷ್ಟಿಸುತ್ತಿರುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಷಡ್ಯಂತ್ರ. ಇಂತಹ ಷಡ್ಯಂತ್ರಗಳಿಗೆ ನಾವು ಹೆದರುವುದಿಲ್ಲ, ಬೆದರುವುದಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

Scroll to Top