ಕನ್ನಡ ಪುಸ್ತಕ ಪ್ರಾಧಿಕಾರ ➤ ಜಾಣ ಜಾಣೆಯರ ಬಳಗ ರಚಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕನ್ನಡ ಪುಸ್ತಕ ಪ್ರಾಧಿಕಾರವು ವಿದ್ಯಾರ್ಥಿ ಯುವಜನರನ್ನು ಸಾಹಿತ್ಯಾಭಿರುಚಿಗೆ ಆಕರ್ಷಿಸಲು ಹಾಗೂ ಸಾಹಿತ್ಯದ ಕ್ರಿಯಾಶೀಲತೆಯನ್ನು ಬೆಳೆಸಲು ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ‘ಜಾಣ ಜಾಣೆಯರ ಬಳಗ’ವನ್ನು ರಚಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಕನಿಷ್ಟ 5 ರಿಂದ 15 ಮಂದಿ ವಿದ್ಯಾರ್ಥಿಗಳನ್ನೊಳಗೊಂಡಂತೆ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಿಕೊಂಡು, ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗಗಳ ಮುಖ್ಯಸ್ಥರ ಅನುಮೋದನೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಕನ್ನಡ ಸಾಹಿತ್ಯಿಕ ವಾತಾವರಣವನ್ನು ಕ್ರಿಯಾಶೀಲವಾಗಿಡುವ ನಿಟ್ಟಿನಲ್ಲಿ ವರ್ಷದಲ್ಲಿ 2 ಕಾರ್ಯಕ್ರಮಗಳಂತೆ ಕನ್ನಡ ಸಾಹಿತ್ಯ ಚಟುವಟಿಕೆಯನ್ನು ಈ ಬಳಗವು ಹಮ್ಮಿಕೊಳ್ಳುತ್ತದೆ.ಇದಕ್ಕಾಗಿ ಪ್ರಾಧಿಕಾರದಿಂದ ಕಾರ್ಯಕ್ರಮ ಒಂದಕ್ಕೆ ರೂ.5,000 ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಾಗುವುದು.

Also Read  ತುಳು ಭಾಷೆ ಉಳಿಯಬೇಕಾದರೆ ತುಳುವರು ಜಾಗೃತರಾಗಬೇಕು: ಎ.ಸಿ.ಭಂಡಾರಿ ► ರಾಮಕುಂಜದಲ್ಲಿ ತುಳು ಕಲಿಯುವ ಮಕ್ಕಳ ರಾಜ್ಯ ಮಟ್ಟದ ರಸಮಂಟಮೆ

ಇದಲ್ಲದೆ ಪ್ರಾಧಿಕಾರವು ಹಮ್ಮಿಕೊಳ್ಳುವ ಎಲ್ಲಾ ಯೋಜನೆ ಹಾಗೂ ಕಾರ್ಯಕ್ರಮಗಳಲ್ಲಿ ಈ ‘ಜಾಣ ಜಾಣೆಯರ ಬಳಗ’ವನ್ನು ತೊಡಗಿಸಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಕಡೆಯ ದಿನ ಜುಲೈ 31.ನಿಗದಿತ ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು.ಅಥವಾ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‍ಸೈಟ್  www.kannadapustakapradhikara.com  ನಲ್ಲಿ ಅರ್ಜಿಯನ್ನು ಪಡೆಯಬಹುದಾಗಿದೆ. ಅರ್ಜಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002, ದೂರವಾಣಿ ಸಂಖ್ಯೆ: 080-22107704 / 22484516 ಸಲ್ಲಿಸಲು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top