ಏಷಿಯನ್ ಫಿಶರೀಸ್ ಸೊಸೈಟಿ ಭಾರತೀಯ ಶಾಖೆ ➤ ಕಡಲ ಮೀನುಗಾರಿಕೆ ಸುಧಾರಣೆ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಏಷಿಯನ್ ಫಿಶರೀಸ್ ಸೊಸೈಟಿ ಭಾರತೀಯ ಶಾಖೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ಸರಕಾರ ಇವರ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆ ಪ್ರಯುಕ್ತ  ಜುಲೈ 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೊಟೇಲಿನ ಪೆಸಿಫಿಕ್-5 ಸಭಾಂಗಣದಲ್ಲಿ ‘ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ’ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾಧಿಕಾರಿ ಎಸ್. ಶಶಿಕಾಂತ ಸೆಂಥಿಲ್ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡೀನ್, ಮೀನುಗಾರಿಕಾ ಮಹಾವಿದ್ಯಾಲಯ, ಮಂಗಳೂರು ಡಾ| ಎ. ಸೆಂಥಿಲ್ ವೇಲ್ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮೀನುಗಾರಿಕಾ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇದರ ನಿರ್ದೇಶಕ ರಾಮಕೃಷ್ಣ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು!

error: Content is protected !!
Scroll to Top