ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ➤ ತುಳು ಅಕಾಡೆಮಿ ಚಾವಡಿ ಸನ್ಮಾನ : ವಸಂತ ವಿ. ಅಮೀನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.24.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ.

ಅದರ ಪ್ರಕಾರ ಜುಲಾಯಿ 26 ರ ಶುಕ್ರವಾರ ಅಪರಾಹ್ನ 3.30 ಕ್ಕೆ ಅಕಾಡೆಮಿ ಸಿರಿಚಾವಡಿಯಲ್ಲಿ ನಾಟಕ ನಿರ್ದೇಶಕರು ಹಾಗೂ ಬರಹಗಾರರಾದ ವಸಂತ ವಿ. ಅಮೀನ್ ಇವರನ್ನು ಸನ್ಮಾನಿಸಲಾಗುವುದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ತುಳು ಚಲನಚಿತ್ರ ನಿರ್ಮಾಪಕರು ಮತ್ತು ನಿರ್ದೇಶಕರಾದ ಡಾ. ಸಂಜೀವ ದಂಡಕೇರಿ ಅವರು ವಸಂತ ವಿ. ಅಮೀನ್ ಇವರನ್ನು ಸನ್ಮಾನಿಸಲಿರುವರು.

Also Read  ➤➤ Breaking News ಮರ್ಧಾಳ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಓರ್ವ ಗಂಭೀರ

ತುಳು ಚಲನಚಿತ್ರ ನಿರ್ಮಾಪಕರು ಮತ್ತು ನಿರ್ದೇಶಕರಾದ ರಿಚರ್ಡ್ ಕ್ಯಾಸ್ಟಲಿನೊ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top