ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಸಪ್ಟೆಂಬರ್ 5 ರೊಳಗೆ ಅರ್ಜಿಯನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು 575002 ಇವರಿಗೆ ತಲುಪುವಂತೆ ಕಳುಹಿಸಬೇಕು. 60% ಗಿಂತ ಅಧಿಕ ಅಂಕಗಳನ್ನು (2018-19) ಗಳಿಸಿದ್ದ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.kenatakapost.gov.in ನ್ನು ಸಂಪರ್ಕಿಸಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Also Read  ಮನೆಯವರಿಂದ ಪ್ರೀತಿ ನಿರಾಕರಣೆ ➤ 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು..!

error: Content is protected !!
Scroll to Top