ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಮೆಡಿಕಲ್ & ಇಂಜಿನಿಯರಿಂಗ್ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ – ಪ್ರವರ್ಗ-1, ಎಸ್.ಸಿ. & ಎಸ್.ಟಿ. ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ – ರೂ. 1 ಲಕ್ಷ.

www.backwardclasses.kar.nic.in ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 20. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.backwardclasses.kar.nic.in ಅನ್ನು ನೋಡಬಹುದು.

Also Read  ಬಂಟ್ವಾಳ: ಆಲ್ಟೋ ಕಾರಿನಲ್ಲಿ ಅಕ್ರಮ ಗೋಸಾಗಾಟ ➤ ಆರೋಪಿಗಳು ಅಂದರ್

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwhosteladmission@gmail.com ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top