ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ➤ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾತಿ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.2019-20ನೇ ಸಾಲಿನಲ್ಲಿ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಈ ತರಬೇತಿಗೆ ದಾಖಲಾಗಲು ಇಚ್ಚಿಸುವ ಅಭ್ಯರ್ಥಿಗಳು ದಾಖಲಾತಿ ಅರ್ಜಿಗಳನ್ನು ಸಲ್ಲಿಸಲು ಜುಲೈ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಪ್ರಥಮ ಡಿ.ಎಲ್.ಇಡಿ ಮತ್ತು ಡಿ.ಪಿ.ಇಡಿ ಕೋರ್ಸುಗಳಿಗೆ ದಾಖಲಾಗ ಬಯಸುವ ಅರ್ಹ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‍ಸೈಟ್ www.schooleducation.kar.nic.in ನಲ್ಲಿರುವ ದಾಖಲಾತಿ ಅರ್ಜಿಯನ್ನು ಮುದ್ರಿಸಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಿಸಿದ ಡಯಟ್‍ಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ಡಿ.ಎಲ್.ಇಡಿ ಕೋರ್ಸಿಗೆ: ದ್ವಿತೀಯ ಪಿ.ಯು.ಸಿ./12ನೇ ತರಗತಿಯ ಪರೀಕ್ಷೆಯಲ್ಲಿ ಎಸ್.ಸಿ/ಎಸ್.ಟಿ./ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ 45% ಮತ್ತು ಇತರೆ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಟ 50% ಅಂಕಗಳನ್ನು ಪಡೆದಿರಬೇಕು. ಡಿ.ಪಿ.ಇಡಿ. ಕೋರ್ಸಿಗೆ ಸೇರುವ ಎಲ್ಲಾ ಅಭ್ಯರ್ಥಿಗಳು ದ್ವಿತೀಯ ಪಿ.ಯು.ಸಿ./12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಟ 45% ಅಂಕಗಳನ್ನು ಹಾಗೂ ಶಿಕ್ಷಣ ಇಲಾಖೆ ಅಥವಾ ವಿಶ್ವವಿದ್ಯಾಲಯ ಅಥವಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ರಾಜ್ಯ ಅಥವಾ ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಕನಿಷ್ಟ 40% ಅಂಕಗಳನ್ನು ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಜೈಲ್‍ರಸ್ತೆ, ಕೊಡಿಯಾಲ್‍ಬೈಲು, ಮಂಗಳೂರು ಇವರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 0824-2493052 ಸಂಪರ್ಕಿಸಬಹುದು.ಸರಕಾರದ ಆದೇಶದಂತೆ ಸರ್ಕಾರಿ ಮಹಿಳಾ ಶಿಕ್ಷಕಿಯರ ತರಬೇತಿ ಸಂಸ್ಥೆ, ಬಲ್ಮಠ, ಮಂಗಳೂರು ಸಂಸ್ಥೆಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕೊಡಿಯಾಲ್‍ಬೈಲು, ಮಂಗಳೂರು, ಇಲ್ಲಿಗೆ ವಿಲೀನಗೊಳಿಸಲಾಗಿದೆ.

ಆದ್ದರಿಂದ  ಅರ್ಜಿಯನ್ನು ಸಲ್ಲಿಸುವ ವೇಳೆ ಅಭ್ಯರ್ಥಿಗಳು ಸರ್ಕಾರಿ ಮಹಿಳಾ ಶಿಕ್ಷಕಿಯರ ತರಬೇತಿ ಸಂಸ್ಥೆ, ಬಲ್ಮಠ, ಮಂಗಳೂರು ಸಂಸ್ಥೆಯ ಬದಲಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಕೊಡಿಯಾಲ್‍ಬೈಲು, ಮಂಗಳೂರು, ದ.ಕ ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಕೊಡಿಯಾಲ್‍ಬೈಲು, ಮಂಗಳೂರು, ದ.ಕ ಸಂಸ್ಥೆಯ ಜಿಲ್ಲೆಯಲ್ಲಿನ ಏಕ ಮಾತ್ರ ಸರ್ಕಾರಿ ಡಿ.ಎಲ್.ಇಡಿ ಸಂಸ್ಥೆಯಾಗಿರುತ್ತದೆ ಎಂದು ಪ್ರಾಚಾರ್ಯರು ಹಾಗೂ ಪದನಮಿತ್ತ ಉಪನಿರ್ದೇಶಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join WhatsApp Group

WhatsApp Share