ವಿಶ್ವ ಹಿರಿಯ ನಾಗರಿಕರ ದಿನಾಚರಣೆ ➤ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯನಾಗರಿಕರ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯನಾಗರಿಕರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯನಾಗರಿಕ ಸಾಧಕರಿಗೆಪ್ರಶಸ್ತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

(ಸಾಂಸ್ಥಿಕ,ಕಾನೂನು,ಶಿಕ್ಷಣ ಕ್ಷೇತ್ರ,ಕ್ರೀಡಾ ಕ್ಷೇತ್ರ,ಸಾಹಿತ್ಯ ಕ್ಷೇತ್ರ,ಕಲಾ ಕ್ಷೇತ್ರ,ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜಸೇವೆ) ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯನಾಗರಿಕರಿಗೆ ಪ್ರಶಸ್ತಿಗಳನ್ನು ಹಾಗೂ ಹಿರಿಯನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ಪ್ರಶಸ್ತಿಗಳನ್ನು ರಾಜ್ಯ ಸರಕಾರವು ನೀಡಲಿದೆ. ಈ ಬಗ್ಗೆ ದ.ಕ ಜಿಲ್ಲೆಯಿಂದ ಪ್ರಶಸ್ತಿಗೆ ಅರ್ಜಿ ಹಾಕಲು ಬಯಸುವ ಹಿರಿಯ ನಾಗರಿಕರು ಹಾಗೂ ಸಂಘ ಸಂಸ್ಥೆಗಳು ಪ್ರಶಸ್ತಿಗೆ ಅರ್ಜಿ ಹಾಕಬಹುದಾಗಿದೆ.

Also Read  ಉಡುಪಿ: ವಾರಿಸುದಾರರಿಲ್ಲದ ಶವ ಸಂಸ್ಕಾರ 

ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 9 ಆಗಿದ್ದು, ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006. ದೂರವಾಣಿ ಸಂಖ್ಯೆ: 0824-2458173,2455999 ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ Website:-www.dwdsc.kar.nic.in ಮತ್ತು ಅರ್ಜಿ ನಮೂನೆಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top