ಅಪರಿಚಿತ ಗುಂಪೊದರಿಂದ ನಿವೃತ್ತ ಸೇನಾಧಿಕಾರಿಯ ಹತ್ಯೆ

(ನ್ಯೂಸ್ ಕಡಬ) newskadaba.com ಅಮೇಠಿ, ಜುಲೈ.29.ನಿವೃತ್ತ ಸೇನಾಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಅಮೇಠಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಅಪರಿಚಿತ ವ್ಯಕ್ತಿಗಳ ಗುಂಪೊಂದು ರಾತ್ರಿ ವೇಳೆ ಏಕಾಏಕಿ ಮನೆಯೊಳಗೆ ನುಗ್ಗಿ  ದೊಣ್ಣೆಗಳಿಂದ ಅಮಾನತ್‌ ಉಲ್ಲಾ ಅವರ ಮೇಲೆ ಹಲ್ಲೆ ಮಾಡಿದೆ. ತಮ್ಮ ಮನೆ ಮುಂಭಾಗದಲ್ಲಿರುವ ಅಂಗಡಿಯಲ್ಲಿನ ಸಾಮಾನುಗಳನ್ನು ಕಳವು ಮಾಡಲು ಯತ್ನಿಸುತ್ತಿರುವಾಗ ಪತಿ ಅಮಾನುಲ್ಲಾ ತಡೆದಿದ್ದರು. ನಾನು ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂದು ಹೇಳಿದಾಗ ಗುಂಪು ಏಕಾಏಕಿ ಮನೆಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದು, ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದಿರಿಂದ ಅವರು ಮೃತಪಟ್ಟಿದ್ದಾರೆ ಎಂದು ಅಮಾನತ್‌ ಅವರ ಪುತ್ರ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಅಮಾನುಲ್ಲಾ ಪತ್ನಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ವಿವರಿಸಿದ್ದಾರೆ ಎಂದು ಎಎಸ್ ಪಿ ದಯಾರಾಮ್ ಹೇಳಿದ್ದಾರೆ.

Also Read  ಅಂತರಾಷ್ಟ್ರೀಯ ಯೋಗ ದಿನಾಚರಣೆ

 

error: Content is protected !!
Scroll to Top