ಅಂಗನವಾಡಿ ನೇಮಕಾತಿ ➤ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 17 ಅಂಗನವಾಡಿ ಸಹಾಯಕಿಯರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಪ್ರಕಟಣಾ ಫಲಕದಲ್ಲಿ ಜುಲೈ 29 ರಂದು ಪ್ರಕಟಿಸಲಾಗಿದೆ.


ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 5 ರಂದು ಅಪರಾಹ್ನ 5.30ರೊಳಗೆ ಲಿಖಿತವಾಗಿ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ), ಸ್ವೀಕಾರ ಕೇಂದ್ರ ಕಟ್ಟಡ, ಮೂಡುಶೆಡ್ಡೆ, ವಾಮಂಜೂರು ಇವರಿಗೆ ನೀಡಬೇಕು. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಗ್ರಾಮಾಂತರ ಇವರ ಪ್ರಕಟಣೆ ತಿಳಿಸಿದೆ.

Also Read  ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ

error: Content is protected !!