ಪ್ರವಾಸೋದ್ಯಮ ಇಲಾಖೆ ➤ ಪ್ರವಾಸಿ ಟ್ಯಾಕ್ಸಿಗಳನ್ನು ಪಡೆಯಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಪ್ರವಾಸೋದ್ಯಮ ಇಲಾಖೆಯಿಂದ 2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಘಟಕ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಲಘು ವಾಹನ ಚಾಲನಾ ಪರವಾನಗಿ ಹಾಗೂ ಚಾಲಕರ ಬ್ಯಾಜ್ ಹೊಂದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಿ ಕೊಡಲು ಪ್ರವಾಸಿ ಟ್ಯಾಕ್ಸಿಗಳನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯ ಧನ ಒದಗಿಸಿ ಸಾಲ ಸೌಲಭ್ಯದೊಂದಿಗೆ ಖರೀದಿಸಿ ವಿತರಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಗಸ್ಟ್ 1 ರಿಂದ 16 ರವರೆಗೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 16. ಎಂದು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

Also Read  ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

error: Content is protected !!
Scroll to Top