ಜಿಲ್ಲಾ ಆಯುಷ್ ಇಲಾಖೆಯಿಂದ ಡೆಂಗ್ಯೂ ಡ್ರೈವ್ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಜಿಲ್ಲಾ ಆಯುರ್ವೇದ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯಲ್ಲಿ ಡೆಂಗ್ಯೂ-ಡ್ರೈವ್ ಅಭಿಯಾನವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.


ಆಯುಷ್ ವೈದ್ಯಾಧಿಕಾರಿ ಡಾ. ಹೇಮವಾಣಿ ಇವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಜಿಲ್ಲೆಯ ಆಯುಷ್ ವೈದ್ಯರು ಮತ್ತು ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಜಿಲ್ಲಾ ಆಯುಷ್ ಆಸ್ಪತ್ರೆಯ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ವೈದ್ಯರು ಮತ್ತು ಸಿಬ್ಬಂದಿಗಳು ಸ್ವಚ್ಛಗೊಳಿಸಿ ಸಾಂಕ್ರಾಮಿಕ ಖಾಯಿಲೆಗಳಾದ ಡೆಂಗ್ಯೂ, ಮಲೇರಿಯಾ ಮುಕ್ತಗೊಳಿಸಲು ಸಾರ್ವಜನಿಕರಿಗೆ ಪ್ರೇರಣೆ ನೀಡಿದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಇವರ ಪ್ರಕಟಣೆ ತಿಳಿಸಿದೆ.

Also Read  ಖಾಸಗಿ ಬಸ್ ಪಲ್ಟಿ ➤ ಹಲವರಿಗೆ ಗಾಯ

 

error: Content is protected !!
Scroll to Top