ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಹಿರಿಯ ತುಳು ಸಾಹಿತಿ, ರಂಗಭೂಮಿ ಕಲಾವಿದ ಮತ್ತು ತುಳು ಅಕಾಡೆಮಿಯ ಮಾಜಿ ಅಧ್ಯಕ್ಷರಾದ ದಿ| ಸೀತಾರಾಮ್ ಕುಲಾಲ್ ಮತ್ತು ತುಳು, ಕನ್ನಡ ವಿದ್ವಾಂಸರಾದ ದಿ| ಏರ್ಯ ಲಕ್ಷ್ಮೀನಾರಾಯಣ ಆಳ್ವ ರವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ.

ಆದ್ದರಿಂದ ಜುಲೈ 31ರಂದು ಸಂಜೆ 4.30 ಗಂಟೆಗೆ ಮಂಗಳೂರಿನ ಉರ್ವಸ್ಟೋರಿನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ‘ಸಿರಿಚಾವಡಿ’ ಯಲ್ಲಿ ಸಂತಾಪ ಸಭೆಯನ್ನು ಆಯೋಜಿಸಲಾಗಿದೆ. ದಿ| ಸೀತಾರಾಮ್ ಕುಲಾಲ್ ಮತ್ತು ದಿ| ಏರ್ಯ ಲಕ್ಷ್ಮೀನಾರಾಯಣ ಆಳ್ವ ರವರ ಸಹವರ್ತಿಗಳು ಮತ್ತು ಅಭಿಮಾನಿಗಳು ಈ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ. ಭಂಡಾರಿ ಇವರ ಪ್ರಕಟಣೆ ತಿಳಿಸಿದೆ.

Also Read  ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು

error: Content is protected !!
Scroll to Top