ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಳಿಯ ಸಿದ್ದಾರ್ಥ್ ಮಂಗಳೂರಿನಲ್ಲಿ ದಿಢೀರ್ ನಾಪತ್ತೆ…! ➤ ಉಳ್ಳಾಲ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30. ಮಾಜಿ ಮುಖ್ಯಮಂತ್ರಿ ಎಸ್‌. ಎಂ. ಕೃಷ್ಣ ಅಳಿಯ ವಿ.ಜಿ. ಸಿದ್ದಾರ್ಥ್‌ ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದು, ತೀವ್ರ ಶೊಧ ಕಾರ್ಯ ಮುಂದುವರಿದಿದೆ.

ವಿ.ಜಿ. ಸಿದ್ದಾರ್ಥ್‌ ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದರು. ಕಾರಿನ ಚಾಲಕ ಪೊಲೀಸರಿಗೆ ನೀಡಿದ ಮಾಹಿತಿಯಂತೆ ಅವರು ಬೆಂಗಳೂರಿನಿಂದ ಮಂಗಳೂರಿಗೆಂದು ಹೇಳಿ ಚಾಲಕ ಮತ್ತು ಇಬ್ಬರ ಜತೆಗೂಡಿ ಕಾರಿನಲ್ಲಿ ಹೊರಟಿದ್ದರು. ಪಂಪ್‌ವೆಲ್‌ ತಲುಪಿದಾಗ ಜತೆಗಿದ್ದ ಇಬ್ಬರು ಕಾರಿನಿಂದ ಇಳಿದಿದ್ದು, ಬಳಿಕ ಮಾಲಕನ ಸೂಚನೆಯಂತೆ ಚಾಲಕ ಕಾರನ್ನು ಕಾಸರಗೋಡು ಹೆದ್ದಾರಿಯತ್ತ ತಿರುಗಿಸಿದ್ದನು. ನೇತ್ರಾವತಿ ಸೇತುವೆ ಬಳಿ ತಲುಪುತ್ತಿದ್ದಂತೆ ಕಾರನ್ನು ಎಡ ಬದಿಯಲ್ಲಿರುವ ಕಂರ್ಬಿಸ್ಥಾನದ ರಸ್ತೆಯಲ್ಲಿ ಚಲಾಯಿಸಲು ಹೇಳಿದ್ದರು.
ಕೆಲವು ಮೀಟರ್‌ ಮುಂದೆ ಸಾಗಿದ ಬಳಿಕ ಕಾರನ್ನು ನಿಲ್ಲಿಸಲು ಹೇಳಿ ಮೊಬೈಲ್‌ನಲ್ಲಿ ಮಾತನಾಡುತ್ತ ಸ್ವಲ್ಪ ಮುಂದಕ್ಕೆ ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ಮೊಬೈಲ್‌ಗೆ ಕರೆ ಮಾಡಿದರೆ ಸ್ವಿಚ್‌ ಆಫ್ ಸಂದೇಶ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Also Read  ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಣೆ

ಸ್ಥಳಕ್ಕೆ ಜಿಲ್ಲಾಧಿಕಾರಿ, ಶಾಸಕ ಯು.ಟಿ ಖಾದರ್‌ ಆಗಮಿಸಿದ್ದಾರೆ. ಅಗ್ನಿಶಾಮಕ ದಳ, ತಣ್ಣೀರುಬಾವಿಯಿಂದ ಮುಳುಗು ತಜ್ಞರು ಆಗಮಿಸಿದ್ದು ನೇತ್ರಾವತಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

error: Content is protected !!
Scroll to Top