(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಜಿಲ್ಲೆಯಲ್ಲಿ ಕ್ಷಯರೋಗದಿಂದ ಒಳಪಟ್ಟವರ ಬಗ್ಗೆ ಮಾಹಿತಿ ಕಲೆ ಹಾಕಿ ಅವರಿಗೆ ಸರಿಯಾದ ಜಾಗೃತಿ ಮತ್ತು ಚಿಕಿತ್ಸೆ ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲ್ಲಿ ನಡೆದ ಜಿಲ್ಲಾ ಕ್ಷಯ ಕೇಂದ್ರದ ಪರಿಷ್ಕ್ರತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಪಾಲುದಾರ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು ಈ ರೋಗದ ಬಗ್ಗೆ ಎಲ್ಲಾ ತಾಲೂಕು ಮಟ್ಟದಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯ ರೋಗಿಗಳ ಬಗ್ಗೆ ಮಾಹಿತಿ ಪಡೆಯಬೇಕು ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.
ಮಾನಸಿಕ ಆರೋಗ್ಯದ ಜೊತೆಗೆ ಆತ್ಮಸ್ಥೈರ್ಯವನ್ನು ತುಂಬುವ ಕೆಲಸ ಆಗಬೇಕು. ಜಿಲ್ಲಾಡಳಿತ ಪಾತ್ರ ಸಂಪೂರ್ಣವಾಗಿ ನಿಮ್ಮ ಬೆಂಬವಾಗಿರುತ್ತದೆ ಮತ್ತು ಯಾರು ಕ್ಷಯ ರೋಗಕ್ಕೆ ಒಳಗಾಗಿರುತ್ತಾರೋ ಅವರಿಗೆ ಸರಿಯಾದ ಸರ್ಕಾರಿ ಸೌಲಭ್ಯಗಳು ದೊರಕುವಂತೆ ಮಾಡಬೇಕು ಎಂದು ತಿಳಿಸಿದರು. ಕರ್ನಾಟಕ ಖಾಸಗಿ ವ್ಶೆದ್ಯಕೀಯ ಸಂಸ್ಥೆಗಳ ನೋಂದಾವಣಿ ಸಂದರ್ಭದಲ್ಲಿ ಹಾಗೂ ನವೀಕರಣ ಸಂಧರ್ಭದಲ್ಲಿ ನಿಕ್ಷಯ್ ತಂತ್ರಾಂಶದಲ್ಲಿ ನೋಂದಾವಣಿ ಮಾಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಆರೋಗ್ಯಧಿಕಾರಿ ಡಾ ರಾಮಕೃಷ್ಣ ರಾವ್ ಸಲಹೆ ನೀಡಿದರು. ಸಭೆಯಲ್ಲಿ ಜಿಲ್ಲಾ ಕ್ಷಯ ರೋಗ ಚಿಕಿತ್ಸಾ ಕೇಂದ್ರದ ಅಧಿಕಾರಿ ಡಾ ಬದ್ರುದ್ದೀನ್ ಎಂ.ಎನ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಸ್ಪೂರ್ತಿ ಗೌಡ, ಮತ್ತು ಮತ್ತಿತರರು ಉಪಸ್ಥಿತರಿದ್ದರು.