ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.30.ಬಿಜೆಪಿ ತನ್ನ ನಿರ್ಧಾರವನ್ನು ಬದಲಿಸಿಕೊಂಡಿದ್ದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸ್ಪೀಕರ್​ ಸ್ಥಾನಕ್ಕೆ ಆಯ್ಕೆ ಮಾಡಿದೆ.

ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ನೀಡಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ನಂತರ ಇವತ್ತು ಏಕಾಏಕಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ವಿಧಾನಸಭಾ ಅಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಸಿಎಂ ಸೂಚಿಸಿದ್ದರು.

Also Read  ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..!

ಈ ಬಗ್ಗೆ ಕೆ.ಜಿ.ಬೋಪಯ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಗೇರಿಯವರು ನಾಮಪತ್ರ ಸಲ್ಲಿಸಿದ್ದು ಸಂತೋಷ ತಂದಿದೆ. ನನಗೆ ಸ್ಪೀಕರ್​ ಹುದ್ದೆ ಬೇಡ ಎಂದು ಮೊದಲೇ ಹೇಳಿದ್ದೆ. ಇದೀಗ ಖುಷಿಯಾಗಿದೆ ಎಂದು ಬೋಪಯ್ಯನವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಲ್ಲದೆ, ಕಾಗೇರಿಯವರಿಗೆ ದೂರುವಾಣಿ ಮೂಲಕ ಶುಭಾಶಯ ಕೋರಿದ್ದಾರೆ ಎನ್ನಲಾಗಿದೆ. ಸ್ಪೀಕರ್​ ಹುದ್ದೆಗೆ ನಾಮಪತ್ರ ಸಲ್ಲಿಸಲು ಇಂದು ಮಧ್ಯಾಹ್ನ 12.30ರ ವರೆಗೆ ಅವಕಾಶ ಇತ್ತು. ಆದರೆ, ಪ್ರತಿಪಕ್ಷಗಳ ಅಭ್ಯರ್ಥಿಗಳು ಯಾರೂ ನಾಮಪತ್ರ ನೀಡಿಲ್ಲ. ಹೀಗಾಗಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.

Also Read  ಹೃದಯಾಘಾತ- ಸಾವಿನಲ್ಲೂ ಒಂದಾದ ದಂಪತಿ

 

error: Content is protected !!
Scroll to Top