ಕರ್ನಾಟಕ ಚಲನಚಿತ್ರ ಅಕಾಡೆಮಿ ➤ ‘ಬೆಳ್ಳಿ ಹೆಜ್ಜೆ’ಯಲ್ಲಿ ನಮ್ಮೊಂದಿಗೆ – ಡಾ. ರಿಚರ್ಡ್ ಕ್ಯಾಸ್ಟಲಿನೋ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಕರ್ನಾಟಕ ಚಲನಚಿತ್ರ ಅಕಾಡೆಮಿ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಇವರ ಸಹಯೋಗದೊಂದಿಗೆ ಖ್ಯಾತ ಚಲನಚಿತ್ರ ಗಣ್ಯರೊಂದಿಗೆ ಸಂವಾದ ನಡೆಸುವ ‘ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮ ಆಗಸ್ಟ್ 3 ರಂದು ಸಂಜೆ 5 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ.


ಹಿರಿಯ ಚಿತ್ರ ನಿರ್ದೇಶಕ ಡಾ| ರಿಚರ್ಡ್ ಕ್ಯಾಸ್ಟಲಿನೋ ಅವರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಅವರು ಇದನ್ನು ನಿರ್ವಹಿಸಲಿದ್ದಾರೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಡಾ. ನಾಗತಿಹಳ್ಳಿ ಚಂದ್ರಶೇಖರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ವಿಶ್ರಾಂತ ಕುಲಪತಿ ಡಾ. ಬಿ ಎ.ವಿವೇಕ ರೈ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Also Read  ಆಂಜನೇಯಸ್ವಾಮಿ ನೆನೆಯುತ್ತ ದಿನ ಭವಿಷ್ಯ ನೋಡೋಣ

ಇದೇ ಸಂದರ್ಭದಲ್ಲಿ ಡಾ| ರಿಚರ್ಡ್ ಕ್ಯಾಸ್ಟಲಿನೋ ಅವರ ಕುರಿತು ಯಾಕೂಬ್ ಖಾದರ್ ಗುಲ್ವಾಡಿ ಅವರು ನಿರ್ದೇಶಿಸಿರುವ ಸಾಕ್ಷ್ಯಚಿತ್ರ ಪ್ರದರ್ಶನ ಕೂಡಾ ಆಯೋಜಿಸಲಾಗಿದೆ. ಚಲನಚಿತ್ರ ಆಸಕ್ತರು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top