ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ ಅಮಾವಾಸ್ಯೆ ಒಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ (ಆಷಾಢ) ತಿಂಗಳಿಗೆ ವಿಶಿಷ್ಟ ರೀತಿಯ ಮಾನ್ಯತೆ ಇದೆ. ಆಟಿ ಕಷಾಯಕ್ಕೂ ಅಗ್ರ ಸ್ಥಾನ ದೊರೆತಿದೆ.

ಕೃಷಿ ಅವಲಂಬಿತ ಪ್ರಾಚೀನ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಯಾವುದೇ ಬೆಳೆಯ ಫಸಲು ಕೊಯ್ಲಿಗೆ ಬರುವುದಿಲ್ಲ. ಈ ತಿಂಗಳಿನಲ್ಲಿ ಬದಲಾಗುವ ಭೂ ವಾತಾವಾರಣ, ನಿರಂತರ ಸುರಿಯುವ ಮಳೆಯನ್ನು ಕಾಣಬಹುದು. ಈ ಕಾರಣದಿಂದಾಗಿ ಈ ಮಾಸದಲ್ಲಿ ಶರೀರದಲ್ಲಿ ಕಂಡು ಬರುವ ರೋಗಗಳು ಮನುಷ್ಯನನ್ನು ನಿತ್ರಾಣ ಮಾಡುತ್ತದೆ. ಮಳೆಗಾಲದಲ್ಲಿ ದೊರಕುವ ಕಚ್ಚಾ ಆಹಾರ ಪದಾರ್ಥಗಳಿಂದ ರೋಗಗಳು ಸಾಮಾನ್ಯ.ಆಟಿ ತಿಂಗಳಿನಲ್ಲಿ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಆಟಿ ಅಮಾವಾಸ್ಯೆ ದಿನದಂದು ಸಾಮೂಹಿಕವಾಗಿ ಕಷಾಯ ಸೇವಿಸುವ ಪದ್ಧತಿ ಬೆಳೆದು ಬಂದಿದೆ.

Also Read  ನಿಲ್ಲಿಸಿದ್ದ ಕಾರಿನ ಗಾಜು ಒಡೆದು 15 ಲಕ್ಷ ಎಗರಿಸಿದ ಕಳ್ಳರು ➤ ಸಿಸಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆ

ಹಾಲೆ ಮರದ ವೈಶಿಷ್ಟ್ಯತೆ : ಈ ಕಷಾಯದ ಔಷಧೀಯ ಉಪಯೋಗದಿಂದ ಇದು ಜಾನಪದ ಔಷಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.ಹಾಲೆ ಮರದ ಕಷಾಯವನ್ನು ಕರಿ ಮೆಣಸು, ಬೆಳ್ಳುಳ್ಳಿ, ಓಮ ಸೇರಿಸಿ ಆಟಿ ತಿಂಗಳ ಅಮಾವಾಸ್ಯೆಯ ನಸುಕಿನಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವಿಸುವ ರೂಢಿ ಇದೆ.ಹಾಲೆ ಮರದ ಎಲೆಯು ಸಾಮಾನ್ಯವಾಗಿ ದಪ್ಪವಾಗಿದ್ದು ಒಂದು ಗೊಂಚಲಿನಲ್ಲಿ 7 ರಿಂದ 9 ಪತ್ರಗಳಿರುತ್ತವೆ. ಎಲೆಗಳ ಅಗಲ ಒಂದರಿಂದ ಎರಡು ಇಂಚು ಇದ್ದು, ಉದ್ದ 6 ರಿಂದ 12ಇಂಚು ಇರುತ್ತದೆ. ಕಡು ಹಸಿರು ವರ್ಣದಿಂದ ಕೂಡಿದ್ದು ಮುರಿದಾಗ ಹಾಲುಹೊರಸೂಸುತ್ತದೆ.ಹಾಲೆ ಮರದ ತೊಗಟೆ ಬೂದು ವರ್ಣದಿಂದ ಕೂಡಿದ್ದು, ದೊರಗಾಗಿದ್ದು ಕಲ್ಲಿನಿಂದ ಜಜ್ಜಿ ಹಾಳೆಗಳಂತೆ ತೆಗೆಯಲು ಬರುವುದು. ಈ ಕಷಾಯವನ್ನು ಕುಡಿಯುವುದರಿಂದ ಶೀತ ವಾತಾವಾರಣವನ್ನು ತಡೆದುಕೊಳ್ಳುವಶಕ್ತಿಬರುತ್ತದೆ.

Also Read  ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ

 

error: Content is protected !!
Scroll to Top